ಶನಿವಾರಸಂತೆ, ಏ. ೧೫: ಶನಿವಾರಸಂತೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾ. ೬ರಂದು ಭ್ರಷ್ಟಾಚಾರ ನಿಗ್ರಹ ದಳದ ವತಿಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಲಾಯಿತು. ಕೊಡಗು ಜಿಲ್ಲಾ ಎಸಿಬಿ ಪೊಲೀಸ್ ನಿಗ್ರಹ ದಳದ ನಿರೀಕ್ಷಕ ಹರೀಶ್ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಸರಕಾರಿ ನೌಕರರು ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿ ನಿರ್ಲಕ್ಷö್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ಹಾಗೂ ಯಾವುದೇ ಸರ್ಕಾರಿ ನೌಕರರು ಅಕ್ರಮ ಆಸ್ತಿಗಳಿಕೆಯ ಬಗ್ಗೆ ಮಾಹಿತಿಯನ್ನು ಕೊಡಗು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಕಚೇರಿ ಅಥವಾ ಎಸಿಬಿ ಅಧೀಕ್ಷಕರು ಮೈಸೂರು ಅವರಿಗೆ ಲಿಖಿತ ಅಥವಾ ಮೌಖಿಕವಾಗಿ ದೂರು ನೀಡಬೇಕೆಂದು ಹೇಳಿ, ಜನರಿಗೆ ಜಾಗೃತಿ ಮೂಡಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಹೇಳಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜ ಶೇಖರ್, ಉಪಾಧ್ಯಕ್ಷ ಎಸ್.ಆರ್. ಮಧು, ಸದಸ್ಯರುಗಳಾದ ಶರತ್ ಶೇಖರ್, ಎಸ್.ಎ. ಆದಿತ್ಯ ಗೌಡ, ಫರ್ಜಾನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜೆ. ಮೇದಪ್ಪ, ಸೇರಿದಂತೆ ಇನ್ನಿತರರು ಹಾಜರಿದ್ದರು.