ಮಡಿಕೇರಿ, ಏ. ೧೫: ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ಚೆಟ್ಟಳ್ಳಿ, ಚೇರಳ ಶ್ರೀಮಂಗಲ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಜಲ್‌ಧನ್ ಮಿಷನ್ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಯಿತು. ಸೋಮವಾರಪೇಟೆ ತಾ.ಪಂ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಅವರು ಕಾಮಗಾರಿಯನ್ನು ಉದ್ಘಾಟಿಸಿದರು. ಪ್ರತಿಯೊಂದು ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಸಿಗಬೇಕು ಎನ್ನುವ ಕಾರಣಕ್ಕಾಗಿ ಕೇಂದ್ರ ಸರ್ಕಾರ ಈ ಮಹತ್ವದ ಯೋಜನೆ ಯನ್ನು ಜಾರಿಗೆ ತಂದಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.