ಸೋಮವಾರಪೇಟೆ, ಏ. ೧೫: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಆಲೂರುಸಿದ್ದಾಪುರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವ ಸಲುವಾಗಿ ತಾ. ೧೭ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ರ ವರೆಗೆ ಉಪವಿಭಾಗ ಕಚೇರಿಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಧನಂಜಯ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.