ಕುಶಾಲನಗರ, ಏ. ೧೬: ಕುಶಾಲನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಮಂಜೇಗೌಡರ ಸಮ್ಮುಖದಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ಮಟ್ಟದ ಘಟಕದ ಅಧ್ಯಕ್ಷರ ಆಯ್ಕೆ ಹಾಗೂ ಸಭೆ ಆಯೋಜಿಸಲಾಗಿತ್ತು.

ಸೋಮವಾರಪೇಟೆ ತಾಲೂಕಿನ ನೂತನ ಅಧ್ಯಕ್ಷರಾಗಿ ಚಂದ್ರಿಕಾ ಹಾಗೂ ಪ್ರಧಾನ ಕಾರ್ಯದರ್ಶಿ ಯಾಗಿ ಆಸ್ಮಾ ತುನ್ನೀಸ್ ಅವರನ್ನು ರಾಜ್ಯ ಅಧ್ಯಕ್ಷ ಅರಳಾಪುರ ಮಂಜೇಗೌಡ ಮತ್ತು ಮಹಿಳಾ ರಾಜ್ಯ ಅಧ್ಯಕ್ಷೆ ಪಂಕಜ ರವಿಶಂಕರ್ ಅವರ ಸಮ್ಮುಖದಲ್ಲಿ ಹಸಿರು ಶಲ್ಯ ಹೊದಿಸುವ ಮೂಲಕ ರೈತಸಂಘಕ್ಕೆ ನೇಮಕ ಮಾಡಿಕೊಳ್ಳಲಾಯಿತು.

ನಂತರ ರಾಜ್ಯಾಧ್ಯಕ್ಷ ಮಂಜೇಗೌಡರು ಮಾತನಾಡಿ, ಇಂದು ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಇಲ್ಲ. ಸರ್ಕಾರ ಕೊರೊನಾ ಹೆಸರಿನಲ್ಲಿ ರೈತರ ಜೀವನದಲ್ಲಿ ಅನ್ಯಾಯ ಮಾಡುತ್ತಿದೆ. ಇವತ್ತಿನ ದಿನದಲ್ಲಿ ರೈತರ ಜೀವನ ನಡೆಸಲು ತುಂಬಾ ತೊಂದರೆ ಯಾಗುತ್ತಿದೆ. ಭೂಮಸೂದೆ ಕಾಯ್ದೆ ತಂದಿರುವುದು ಸರಿಯಲ್ಲ. ಇದರ ಜೊತೆಯಲ್ಲಿ ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ನಡೆಸುತ್ತಿರು ವುದರಿಂದ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಈ ಎಲ್ಲಾ ವಿಚಾರಗಳನ್ನು ರೈತಸಂಘ ಸಂಪೂರ್ಣವಾಗಿ ಖಂಡಿಸುತ್ತದೆ ಎಂದರು.

ಈ ಸಂದರ್ಭ ಮೈಸೂರು ಜಿಲ್ಲಾ ಅಧ್ಯಕ್ಷ ಅಬ್ಬೀಬ್ ಮಲ್ಲಿಕ್, ಉಪಾಧ್ಯಕ್ಷ ಮಂಜುನಾಥ, ಮಹಿಳಾ ಜಿಲ್ಲಾಧ್ಯಕ್ಷೆ ಉಮಾ, ಉಪಾಧ್ಯಕ್ಷೆ ಜಲಜಾಕ್ಷಿ, ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ, ಸಂಚಾಲಕಿ ನಾಗರತ್ನ, ಜಿಲ್ಲಾ ಕಾರ್ಯಾಧ್ಯಕ್ಷ ರಾಮೇಗೌಡ, ಜಿಲ್ಲಾ ಉಪಾಧ್ಯಕ್ಷ ಮಂಜು ಬಿ.ಸಿ., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಬ್ದುಲ್, ಜಿಲ್ಲಾ ಸಂಚಾಲಕ ಅಂತೋನಿ, ಹುಣಸೂರು ತಾಲೂಕು ಅಧ್ಯಕ್ಷ ಮೋದೂರು ಮಹೇಶ್, ಪ್ರಧಾನ ಕಾರ್ಯದರ್ಶಿ ಶಾಂತಕುಮಾರ್, ಹುಣಸೂರು ತಾಲೂಕು ಅಧ್ಯಕ್ಷೆ ಸುಕನ್ಯಾ ರಮೇಶ್ ಹಾಜರಿದ್ದರು.