*ಸಿದ್ದಾಪುರ ಏ.೧೬ : ಅಭ್ಯತ್ ಮಂಗಲ ಗ್ರಾಮದ ಒಂಟಿಯAಗಡಿಯಲ್ಲಿ ಐವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮೂಡಿದೆ.

ಈ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಗ್ರಾ.ಪಂ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಮತ್ತು ಸ್ವಯಂ ನಿಯಂತ್ರಣಕ್ಕೆ ಒಳಪಡುವುದು ಖಡ್ಡಾಯವೆಂದು ಜನ ಜಾಗೃತಿ ಮೂಡಿಸಿದೆ. ೪೫ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆಯುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.