ಮಡಿಕೇರಿ, ಏ. ೧೬: ಸರ್ಕಾರದ ಸುತ್ತೋಲೆಯಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗದ ೨ನೇ ಅಲೆಯು ಹರಡುತ್ತಿರುವುದರಿಂದ ರಾಜ್ಯದ ೧೦ ಜಿಲ್ಲೆಗಳಲ್ಲಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಸೂಚಿಸ ಲಾಗಿತ್ತು. ಕೋವಿಡ್-೧೯ರ ಸಾಂಕ್ರಾಮಿಕ ರೋಗವು ರಾಜ್ಯಾ ದಾದ್ಯಂತ ವ್ಯಾಪಿಸುತ್ತಿರುವ ಹಿಲ್ಲೆಯಲ್ಲಿ ಸಾರ್ವಜನಿಕರು ಒಂದೆಡೆ ಗುಂಪು ಗುಂಪಾಗಿ ಸೇರುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಈ ಸಾಂಕ್ರಾಮಿಕ ರೋಗವು ಹರಡುವು ದನ್ನು ನಿಯಂತ್ರಿಸುವ ಉದ್ದೇಶದಿಂದ ಏಪ್ರಿಲ್ ತಿಂಗಳ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಸ್ಥಗಿತಗೊಳಿಸುವಂತೆ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಸುತ್ತೋಲೆ ಯಲ್ಲಿ ಆದೇಶಿಸಿದ್ದಾರೆ.