ಸೋಮವಾರಪೇಟೆ, ಏ. ೧೫: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರು, ವಾಹನ ಚಾಲಕರು ಮತ್ತು ಗ್ರೂಪ್ ಡಿ ನೌಕರರ ಸಂಘದ ವತಿಯಿಂದ ತಾ. ೧೯ ರಂದು ಕೋವಿಡ್ ವೈರಸ್ ಬಗ್ಗೆ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಆರ್. ಸುರೇಶ್ ತಿಳಿಸಿದ್ದಾರೆ.

ಕೊರೊನಾ ೨ನೇ ಅಲೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಂದು ಬೆಳಿಗ್ಗೆ ೧೧.೩೦ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಜಾಥಾ ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.