ಸೋಮವಾರಪೇಟೆ, ಏ. ೧೫: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ನಿಂದನೆ ಮಾಡಿರುವ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಶನಿವಾರಸಂತೆಯ ಸರ್ಕಲ್ ಬಳಿಯಲ್ಲಿ ಕುಂಬ್ರಳ್ಳಿಯ ಕಿರಣ್ ಹಾಗೂ ಸೋಮವಾರಪೇಟೆ, ಏ. ೧೫: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ನಿಂದನೆ ಮಾಡಿರುವ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಶನಿವಾರಸಂತೆಯ ಸರ್ಕಲ್ ಬಳಿಯಲ್ಲಿ ಕುಂಬ್ರಳ್ಳಿಯ ಕಿರಣ್ ಹಾಗೂ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ನಿರ್ವಾಣಪ್ಪ, ಜಿಲ್ಲಾ ಉಪಾಧ್ಯಕ್ಷ ಎಂ.ಪಿ. ಹೊನ್ನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಈ. ಜಯೇಂದ್ರ, ತಾಲೂಕು ಅಧ್ಯಕ್ಷ ಕೊಡ್ಲಿಪೇಟೆ ವಸಂತ್, ಪ್ರಮುಖರಾದ ರಾಜು, ಲತಾ ಜೋಯಪ್ಪ ಹಾನಗಲ್ಲು ಸೇರಿದಂತೆ ಇತರರು ಭಾಗವಹಿಸಿದ್ದರು.