ಮಡಿಕೇರಿ, ಏ.೧೬: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ೨೦೨೧ ರ ಮತದಾನವು ಏಪ್ರಿಲ್, ೨೭ ರಂದು ನಡೆಯಲಿದ್ದು, ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು ೧೯೬೭ ರ ನಿಯಮ ೧೦-ಬಿ ಮತ್ತು ಅಬಕಾರಿ ಕಾಯ್ದೆ ೧೯೬೫ ರ ಕಲಂ ೨೧ ರ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ಮಡಿಕೇರಿ ನಗರಸಭೆ ವ್ಯಾಪ್ತಿಯ ೩ ಕಿ.ಮೀ. ವ್ಯಾಪ್ತಿಯಲ್ಲಿ ತಾ. ೨೬ ರ ಬೆಳಗ್ಗೆ ೭ ಗಂಟೆಯಿAದ ತಾ. ೨೭ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಅನಧಿಕೃತ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಹೊಟೇಲ್, ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತ ಸೋಮಲ್ ಆದೇಶ ಹೊರಡಿಸಿದ್ದಾರೆ.