ಶನಿವಾರಸಂತೆ, ಏ. ೧೫: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಮರಳು ಗಣಿಗಾರಿಕೆ, ಸಾಗಾಣಿಕೆ, ಸಂಗ್ರಹಣೆ ಹಾಗೂ ಮರಳು ನಿಕ್ಷೇಪಗಳ ವಿಚಾರವಾಗಿ ಗುತ್ತಿಗೆದಾರರ ಜತೆ ಚರ್ಚಿಸಲು ಜಿಲ್ಲಾ ಭೂವಿಜ್ಞಾನ ಮತ್ತು ಗಣಿ ಇಲಾಖಾಧಿಕಾರಿ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಗಣಿಗಾರಿಕೆ ಚಟುವಟಿಕೆಗಳ ಕುರಿತು ಇಲಾಖೆಯ ಅಧಿಕಾರಿ ರೋಜಾ ಮಾತನಾಡಿ, ಕೊಡ್ಲಿಪೇಟೆ ಮತ್ತು ಶನಿವಾರಸಂತೆ ಭಾಗದಲ್ಲಿ ಮರಳು ಸಾಗಾಣಿಕೆ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆ ಗುತ್ತಿಗೆದಾರರ ಸಭೆ ಕರೆಯಲಾಗಿದೆ ಎಂದು ತಿಳಿಸಿದ ಅವರು ಗುತ್ತಿಗೆದಾರರಿಗೆ ಮರಳು ಸಂಗ್ರಹಣೆ ಮತ್ತು ಸಾಗಾಣಿಕೆ ಬಗ್ಗೆ ಮಾಹಿತಿ ನೀಡಿದರು.

ತಹಶೀಲ್ದಾರ್ ಗೋವಿಂದ್ ರಾಜ್, ಕೊಡ್ಲಿಪೇಟೆ ನಾಡಕಚೇರಿ ಉಪತಹಶೀಲ್ದಾರ್ ಪುರುಷೋತ್ತಮ್, ಕಂದಾಯ ಪರಿವೀಕ್ಷಕ ಮನುಕುಮಾರ್, ಡಿವೈಎಸ್ಪಿ ಶೈಲೇಂದ್ರ, ವೃತ್ತ ನಿರೀಕ್ಷಕ ಮಹೇಶ್, ಪಿಎಸ್‌ಐ ಎಚ್.ಈ. ದೇವರಾಜ್ ಹಾಗೂ ಗುತ್ತಿಗೆದಾರರು ಹಾಜರಿದ್ದರು.