ಕೂಡಿಗೆ, ಏ. ೧೬: ವಿಶ್ವ ಹಿಂದೂ ಪರಿಷತ್, ಭಜರಂಗದಳ ಕೂಡ್ಲೂರು ಘಟಕ ಮತ್ತು ಸಿಎಸ್ಡಿ ಬಾಯ್ಸ್ ವತಿಯಿಂದ ಕೂಡ್ಲೂರು ಗ್ರಾಮದಲ್ಲಿ ನಡೆದ ಪ್ರಥಮ ವರ್ಷದ ಹೊನಲು ಬೆಳಕಿನ ಎರಡು ದಿನಗಳ ಕಬಡ್ಡಿ ಪಂದ್ಯಾಟದಲ್ಲಿ ಎಂ.ಕೆ. ಫ್ರೆಂಡ್ಸ್ ತಂಡ ಪ್ರಥಮ ಸ್ಥಾನ ಪಡೆದು ರೂ. ೩೦ ಸಾವಿರ ನಗದು, ಟ್ರೋಫಿ, ಬಾಬಿ ಬಾಯ್ಸ್ ತಂಡ ದ್ವಿತೀಯ ಸ್ಥಾನ ಪಡೆದು ರೂ. ೧೫,೦೦೧ ನಗದು ಮತ್ತು ಟ್ರೋಫಿ ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಹೆಬ್ಬಾಲೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಎಸ್. ಶ್ರೀನಿವಾಸ್ ಬಹುಮಾನವನ್ನು ವಿತರಣೆ ಮಾಡಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರು ಮೂಡ್ಲಿಗೌಡ, ಶಿವಮಣಿ, ಗಣೇಶ್, ಶಶಿಕಲಾ ಗೌರವ, ಬಿಜೆಪಿ ಪ್ರಮುಖರಾದ ಗಣಿಪ್ರಸಾದ್, ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಉಮಾಶಂಕರ್, ಸಂಘದ ಕಾರ್ಯದರ್ಶಿ ಪವನ್ ಕುಮಾರ್, ಕೆ.ಬಿ. ಭೋಗಪ್ಪ, ರಾಜಾಚಾರಿ, ಪುಟ್ಟಪ್ಪ ಸೇರಿದಂತೆ ಪರಿಷತ್ತಿನ ಅಧ್ಯಕ್ಷರು ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.