ಸೋಮವಾರಪೇಟೆ, ಏ. ೧೭: ಕಾರನ್ನು ಅಡ್ಡಗಟ್ಟಿ ಬಿಜೆಪಿ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸೇರಿದಂತೆ ಇತರರನ್ನು ತಕ್ಷಣ ಬಂಧಿಸಬೇಕೆAದು ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಅವರು, ಕಳೆದ ತಾ. ೧೫ರಂದು ಕಾರಿನಲ್ಲಿ ಹಾನಗಲ್ಲು ಗ್ರಾಮಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಬಿಜೆಪಿ ಕಾರ್ಯಕರ್ತ ಸಂಪತ್‌ಕುಮಾರ್ ಎಂಬವರ ಮೇಲೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ವಿ. ಮಿಥುನ್, ಪಟ್ಟಣದ ನಿವಾಸಿ ಕಿರಣ್ ಸೇರಿದಂತೆ ಸೋಮವಾರಪೇಟೆ, ಏ. ೧೭: ಕಾರನ್ನು ಅಡ್ಡಗಟ್ಟಿ ಬಿಜೆಪಿ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಸೇರಿದಂತೆ ಇತರರನ್ನು ತಕ್ಷಣ ಬಂಧಿಸಬೇಕೆAದು ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಅವರು, ಕಳೆದ ತಾ. ೧೫ರಂದು ಕಾರಿನಲ್ಲಿ ಹಾನಗಲ್ಲು ಗ್ರಾಮಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಬಿಜೆಪಿ ಕಾರ್ಯಕರ್ತ ಸಂಪತ್‌ಕುಮಾರ್ ಎಂಬವರ ಮೇಲೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ವಿ. ಮಿಥುನ್, ಪಟ್ಟಣದ ನಿವಾಸಿ ಕಿರಣ್ ಸೇರಿದಂತೆ ಬಂಧಿಸಿಲ್ಲ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ತಿಮ್ಮಯ್ಯ ಮಾತನಾಡಿ, ಆರೋಪಿಯನ್ನು ಪಕ್ಷದಿಂದ ವಜಾ ಮಾಡುವ ಮೂಲಕ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಮಹೇಶ್ ತಿಮ್ಮಯ್ಯ ಆಗ್ರಹಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಶೇಖರ್ ಹೇರೂರು, ಮಂಡಲ ಪ್ರಧಾನ ಕಾರ್ಯದರ್ಶಿ ಮೋಹಿತ್ ತಿಮ್ಮಯ್ಯ, ಯುವ ಮೋರ್ಚಾ ನಗರಾಧ್ಯಕ್ಷ ಸಾಗರ್ ನಂಜುAಡ ಉಪಸ್ಥಿತರಿದ್ದರು.