ಸೋಮವಾರಪೇಟೆ, ಏ. ೧೭: ಜೆಡಿಎಸ್ ಅಲ್ಪಸಂಖ್ಯಾತ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿದ್ದ ಸೋಮವಾರಪೇಟೆ ಪಟ್ಟಣದ ಎಂ.ಎ. ರುಬೀನಾ ಅವರನ್ನು ಮಡಿಕೇರಿ ಕ್ಷೇತ್ರ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಹಲವಷ್ಟು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ರುಬೀನಾ ಅವರನ್ನು ಮಡಿಕೇರಿ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ನೇಮಿಸಿದ್ದಾರೆ.