ಗೋಣಿಕೊಪ್ಪ ವರದಿ, ಏ. ೧೮: ಜೆಸಿಐ ಪೊನ್ನಂಪೇಟೆ ಗೋಲ್ಡನ್, ಗ್ರೀನ್ ಡಾಟ್ ಟ್ರಸ್ಟ್ ಸಹಯೋಗದಲ್ಲಿ ತಾ. ೧೯ ರಂದು (ಇಂದು) ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೨ ಗಂಟೆವರೆಗೆ ರಕ್ತ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೧೧೬೪೦೫೫೨ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಜೆಸಿಐ ಪೊನ್ನಂಪೇಟೆ ಗೋಲ್ಡನ್ ಪ್ರಕಟಣೆ ತಿಳಿಸಿದೆ.