ಮಡಿಕೇರಿ, ಏ. ೧೮: ಜಿಲ್ಲೆಯಲ್ಲಿ ತಾ. ೧೮ರ ಬೆಳಿಗ್ಗೆ ೮ ಗಂಟೆ ವೇಳೆಗೆ ೬೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
೫೪ ಆರ್.ಟಿ.ಪಿ.ಸಿ.ಆರ್ ಮತ್ತು ೧೩ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೧, ಸೋಮವಾರಪೇಟೆ ತಾಲೂಕಿನಲ್ಲಿ ೩೩, ವೀರಾಜಪೇಟೆ ತಾಲೂಕಿನಲ್ಲಿ ೧೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೬೮೭೩ ಆಗಿದ್ದು, ೬೪೫೬ ಮಂದಿ ಗುಣಮುಖರಾಗಿದ್ದಾರೆ. ೩೩೩ ಸಕ್ರಿಯ ಪ್ರಕರಣಗಳಿದ್ದು, ೮೪ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆAಟ್ ವಲಯಗಳ ಸಂಖ್ಯೆ ೧೮೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ