ಕೂಡಿಗೆ, ಏ. ೧೮: ಕೂಡಿಗೆ ಕ್ರೀಡಾ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೂಡಿಗೆ ಅರೋಗ್ಯ ಕೇಂದ್ರ ವತಿಯಿಂದ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ವಸತಿ ಗೃಹ ಸಿಬ್ಬಂದಿಗಳಿಗೆ ಕ್ರೀಡಾ ತರಬೇತುದಾರಿಗೆ, ರಕ್ಷಣಾ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಶಾಲೆಯ ನಾಲ್ಕು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ದುರ್ಗಾ ತಿಳಿಸಿದ್ದಾರೆ. ಅಲ್ಲದೆ ಶಾಲೆ ಅವರಣ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.