ನಾಪೋಕ್ಲು, ಏ. ೧೮: ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಸರಕಾರಿ ಶಾಲೆಗಳಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆಯಲು ಶಿಕ್ಷಣ ಇಲಾಖಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಸಮೀಪದ ಹೊದವಾಡ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟಿçÃಯ ಮಾಧ್ಯಮಿಕ ಶಿಕ್ಷಣ ಅಭಿಯಾನ ದಡಿಯಲ್ಲಿ ನಿರ್ಮಿಸಲಾದ ಶಾಲಾ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕಾಭಿವೃದ್ಧಿಗಾಗಿ ಸರಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ ಹೆಚ್ಚಿನ ಶಾಲೆಗಳ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಆದುದರಿಂದ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು, ಶಿಕ್ಷಕರು ಸೇರಿಕೊಂಡು ಈ ಬಗ್ಗೆ ಸೂಕ್ತ ಕಾರ್ಯಯೋಜನೆ ರೂಪಿಸಬೇಕು ಎಂದರು.
ಅಲ್ಪಸAಖ್ಯಾತ ವಿದ್ಯಾರ್ಥಿನಿ ಯರ ವಿದ್ಯಾಭ್ಯಾಸಕ್ಕಾಗಿ ಸರಕಾರ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕಾಭಿವೃದ್ಧಿಗಾಗಿ ಸರಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ ಹೆಚ್ಚಿನ ಶಾಲೆಗಳ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಆದುದರಿಂದ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು, ಶಿಕ್ಷಕರು ಸೇರಿಕೊಂಡು ಈ ಬಗ್ಗೆ ಸೂಕ್ತ ಕಾರ್ಯಯೋಜನೆ ರೂಪಿಸಬೇಕು ಎಂದರು.
ಅಲ್ಪಸAಖ್ಯಾತ ವಿದ್ಯಾರ್ಥಿನಿ ಯರ ವಿದ್ಯಾಭ್ಯಾಸಕ್ಕಾಗಿ ಸರಕಾರ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಅಧ್ಯಕ್ಷೆ ಕುಸುಮಾವತಿ, ಸದಸ್ಯ ಕೊಟ್ಟಮುಡಿ ಹಂಸ ಮಾತನಾಡಿದರು.
ಜಿಲ್ಲಾ ಶಿಕ್ಷಣ ಇಲಾಖಾ ಉಪನಿರ್ದೇಶಕ ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುರಾಜ್, ಸ್ಥಳದಾನಿ ನೆರವಂಡ ಜಿಮ್ಮಿ ಮಂದಣ್ಣ, ಹಿರಿಯರಾದ ಚೌರೀರ ಬೋಪಯ್ಯ, ಹೊದ್ದೂರು ಗ್ರಾ.ಪಂ ಉಪಾಧ್ಯಕ್ಷೆ ಸರಸು, ಸದಸ್ಯರಾದ ಕೆ.ಎಂ. ಮೊಯಿದು, ಮಾಯಿನೆ, ಸಿ.ಜೆ. ನಾಣಯ್ಯ, ಅನಿತಾ, ಮತ್ತಿತರರು ಇದ್ದರು.
ಕಾರ್ಯಕ್ರಮದಲ್ಲಿ ಸ್ಥಳ ದಾನಿಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಮುಖ್ಯ ಶಿಕ್ಷಕಿ ಅಪರ್ಣ ಸ್ವಾಗತ, ಶಿಕ್ಷಕ ಅಶೋಕ್ ನಿರೂಪಿಸಿ, ಶಿಕ್ಷಕಿ ಜಸ್ಮಿ ಉತ್ತಪ್ಪ ವಂದಿಸಿದರು.