ಕುಶಾಲನಗರ, ಏ. ೧೮: ಕಳೆದ ೪೦ ವರ್ಷಗಳ ಅವಧಿಯಲ್ಲಿ ಕುಶಾಲನಗರ ಗಣಪತಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕುಶಾಲನಗರದ ಎಸ್.ಕೆ. ಶ್ರೀನಿವಾಸ್ ಅವರನ್ನು ದೇವಾಲಯಗಳ ಒಕ್ಕೂಟ ಸಮಿತಿ ಮತ್ತು ದೇವಾಲಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಒಕ್ಕೂಟದ ಖಜಾಂಚಿ, ಗಣಪತಿ ದೇವಾಲಯ ಸಮಿತಿಯ ಗೌರವ ಕಾರ್ಯದರ್ಶಿ, ಅಯ್ಯಪ್ಪ ದೇವಾಲಯ ಸಮಿತಿಯ, ಸೋಮೇಶ್ವರ ದೇವಾಲಯ ಆಡಳಿತ ಮಂಡಳಿ ಮತ್ತಿತರ ದೇವಸ್ಥಾನ ಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಶ್ರೀನಿವಾಸ್ ಅವರು ಇದೀಗ ಕುಶಾಲನಗರ ಬಿಟ್ಟು ಬೆಂಗಳೂರಿಗೆ ತೆರಳುತ್ತಿದ್ದು, ಈ ಹಿನ್ನೆಲೆಯಲ್ಲಿ ಗಣಪತಿ ದೇವಾಲಯ ಸೇವಾ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು. ಅಯ್ಯಪ್ಪ ದೇವಾಲಯ ಟ್ರಸ್ಟ್ ವತಿಯಿಂದ ಬೀಳ್ಕೊಡಲಾಯಿತು. ಕುಶಾಲನಗರ ದೇವಾಲಯಗಳ ಒಕ್ಕೂಟದ ವಿಶೇಷ ಸಭೆಯಲ್ಲಿ ಅವರಿಗೆ ಸನ್ಮಾನಿಸಿದರು.

ಈ ಸಂದರ್ಭ ಸಮಿತಿಯ ಪದಾಧಿಕಾರಿಗಳು, ಪ್ರಮುಖರು ಇದ್ದರು.