ಕೂಡಿಗೆ, ಏ. ೧೮: ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಮಾರುಕಟ್ಟೆ ಸಮೀಪದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ನಬಾರ್ಡ್ ಯೋಜನೆಯ ರೂ. ೧೧ ಕೋಟಿ ವೆಚ್ಚದ ಕಾಮಗಾರಿಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪರಿಶೀಲನೆ ನಡೆಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಎಸ್. ಶ್ರೀನಿವಾಸ, ಮಾಜಿ ಅಧ್ಯಕ್ಷ ರಾಜಶೇಖರ, ತೊರೆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವರಾಜ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ಸೇರಿದಂತೆ ಗ್ರಾಮದ ಪ್ರಮುಖರಾದ ನಿವೃತ್ತ ಶಿಕ್ಷಕ ಸುಂದರ ಮಹೇಶ್, ಗ್ರಾಮಸ್ಥರು ಇದ್ದರು.