ಕೂಡಿಗೆ, ಏ. ೧೮: ವಿಶ್ವ ಹಿಂದೂ ಪರಿಷತ್, ಭಜರಂಗದಳ ಮತ್ತು ಸಿ.ಎಸ್.ಡಿ. ಬಾಯ್ಸ್ ವತಿಯಿಂದ ಪ್ರಥಮ ವರ್ಷದ ಹೊನಲು ಬೆಳಕಿನ ಎರಡು ದಿನಗಳ ಕಬಡ್ಡಿ ಪಂದ್ಯಾಟವು ಕೂಡುಮಂಗಳೂರು ವ್ಯಾಪ್ತಿಯ ಕೂಡ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.
ಹೆಬ್ಬಾಲೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಹೆಚ್.ಎಸ್. ಶ್ರೀನಿವಾಸ ಪಂದ್ಯಾಟಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಕಬಡ್ಡಿ ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕು. ಅಲ್ಲದೆ ಯುವ ಜನಾಂಗ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ, ಧನಾತ್ಮಕ ಚಿಂತನೆಗಳೊAದಿಗೆ ಸದೃಢವಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.
ಕೂಡುಮAಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮ್ಮತ್ತಿಯ ಗೋ ಶಾಲೆಯ ಮುಖ್ಯಸ್ಥ ರಾಮಚಂದ್ರ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರು, ಮೂಡ್ಲಿಗೌಡ, ಶಿವಮಣಿ, ಗಣೇಶ್, ಶಶಿಕಲಾ, ಕುಶಾಲನಗರ ಬಿಜೆಪಿ ನಗರ ಅಧ್ಯಕ್ಷ ಉಮಾಶಂಕರ್ ಸೇರಿದಂತೆ ಇನ್ನಿತರರು ಇದ್ದರು.
ಕಬಡ್ಡಿ ಪಂದ್ಯಾವಳಿಯಲ್ಲಿ ಹತ್ತು ತಂಡಗಳು ಭಾಗವಹಿಸಿದ್ದವು. ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಿತು.