ಕೂಡಿಗೆ, ಏ. ೧೯: ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿ ಸಮಿತಿಯ ವತಿಯಿಂದ ವಾರ್ಷಿಕ ಶ್ರೀ ರಾಮಲಿಂಗೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ಸರಳವಾಗಿ ತಾ. ೨೧ ರಂದು ನಡೆಯಲಿದೆ.

ಅಂದು ಪವಿತ್ರ ಗಂಗೋದಕದಿAದ ಶ್ರೀ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಸರಳವಾಗಿ ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಎನ್. ಸುರೇಶ್ ತಿಳಿಸಿದ್ದಾರೆ.