ಮಡಿಕೇರಿ, ಏ. ೧೯: ಪವಿತ್ರ ರಂಜಾನ್ ಮಾಸದ ಉಪವಾಸ ತೊರೆದು ಯುವಕ ನೋರ್ವ ರೋಗಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾನೆ.
ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಸದಸ್ಯ ನಗರದ ತ್ಯಾಗರಾಜ ಕಾಲೋನಿಯ ನಿವಾಸಿ ಅಶಿಕ್ ಎಂಬಾತ ಅನೂಪ ಎಂಬ ಮಹಿಳೆಗೆ ತುರ್ತು ರಕ್ತದ ಅವಶ್ಯಕತೆ ಇದ್ದ ಹಿನ್ನೆಲೆ ಉಪವಾಸ ತೊರೆದು ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.