ಮಡಿಕೇರಿ, ಏ. ೧೯: ಜಿಲ್ಲೆಯಲ್ಲಿ ವಸತಿ ಯೋಜನೆ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ, ಪ್ರತೀ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯಾಧಿ ಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿವೇಶನ, ವಿದ್ಯಾರ್ಥಿ ನಿಲಯ, ಅಂಗನವಾಡಿ, ಸಮುದಾಯ ಭವನ ಹೀಗೆ ಸರ್ಕಾರದ ಹಲವು ಯೋಜನೆ ಗಳಿಗೆ ಭೂಮಿ ಒದಗಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ, 'ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ
(ಮೊದಲ ಪುಟದಿಂದ) ಯೋಜನೆ, ಕೃಷಿ, ತೋಟಗಾರಿಕೆ, ತಾ.ಪಂ. ಹೀಗೆ ಹಲವು ಇಲಾಖೆ ಗಳಿಂದ ಸರ್ಕಾರದ ಉದ್ದೇಶಕ್ಕಾಗಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸರ್ಕಾರಿ ಜಾಗ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ವಸತಿ ರಹಿತರ ಪಟ್ಟಿ ಪಡೆದು ವಸತಿ ರಹಿತರಿಗೆ ನಿವೇಶನ ಒದಗಿಸಬೇಕು. ಕಸ ವಿಲೇವಾರಿಗೆ ಜಾಗ ಕಾಯ್ದಿರಿಸಬೇಕು. ಜಿಲ್ಲೆಯ ಹಲವು ಕಡೆಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸ ಬೇಕು. ಸರ್ಕಾರಿ ಭೂಮಿ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು ಅಗತ್ಯ ಕ್ರಮವಹಿಸು ವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಅಂಗನವಾಡಿ, ವಿದ್ಯಾರ್ಥಿ ನಿಲಯ, ಸಮುದಾಯ ಭವನ, ಸರ್ಕಾರಿ ಕಚೇರಿ ಕಟ್ಟಡಗಳು, ಕಸ ವಿಲೇವಾರಿಗೆ ಜಾಗ ಸಂಬAಧ ವಿವಿಧ ಇಲಾಖೆಗಳಿಂದ ಸಲ್ಲಿಸಲಾಗಿರುವ ಮನವಿಗೆ ಆದ್ಯತೆ ಮೇಲೆ ಜಾಗ ಒದಗಿಸುವಂತೆ ಅವರು ಹೇಳಿದರು. ಭೂ ದಾಖಲೆಗಳ ಉಪ ನಿರ್ದೇಶಕ ಪಿ.ಶ್ರೀನಿವಾಸ್, ಸಹಾಯಕ ನಿರ್ದೇಶಕÀ ವಿರೂಪಾಕ್ಷ, ತಹಶೀಲ್ದಾರರಾದ ಗೋವಿಂದ್ ರಾಜು, ಮಹೇಶ್, ಯೋಗಾನಂದ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ತಮ್ಮ ವ್ಯಾಪ್ತಿಯ ಕಂದಾಯಕ್ಕೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.