ವೀರಾಜಪೇಟೆ, ಏ. ೧೯: ವೀರಾಜಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕೆ.ಬಿ ಹರ್ಷವರ್ಧನ್ (೪೫) ತೀವ್ರ ಹೃದಯಾಘಾತದಿಂದ ತಾ. ೧೮ರ ರಾತ್ರಿ ೧.೩೦ ಗಂಟೆಗೆ ಮೃತಪಟ್ಟಿದ್ದಾರೆ. ರಾತ್ರಿ ೧ ಗಂಟೆಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಆಸ್ಪತ್ರೆಗೆ ತಲುಪುವುದರ ಒಳಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಂತ್ಯಸAಸ್ಕಾರ ಪಟ್ಟಣದ ಮೀನುಪೇಟೆಯಲ್ಲಿರುವ ಮೃತರ ತೋಟದ ಮನೆಯಲ್ಲಿ ಅಪರಾಹ್ನ ೧ ಗಂಟೆಗೆ ನೆರವೇರಿತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ನಗರದ ವಾರ್ಡ್ ಸಂಖ್ಯೆ ೧೩ನೇ ವಾರ್ಡ್ನಿಂದ ಬಿ.ಜೆ.ಪಿ. ಪಕ್ಷದಿಂದ ಸ್ಪರ್ಧಿಸಿ ಚುನಾಯಿತರಾದ ಇವರು, ಕಳೆದ
(ಮೊದಲ ಪುಟದಿಂದ) ನವೆಂಬರ್ನಿAದ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಗೌರವಾರ್ಥ ಅಪರಾಹ್ನ ೧೨ ಗಂಟೆಯಿAದ ೨ ಗಂಟೆವರೆಗೆ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಲಾಯಿತು.
ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಅಭಿಯಂತರ ಹೇಮಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರು, ಮೀನುಪೇಟೆ ಮುತ್ತಪ್ಪ ದೇವಾಲಯದ ಅಧ್ಯಕ್ಷ ಇ.ಸಿ. ಜೀವನ್ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.