ಕೂಡಿಗೆ, ಏ. ೧೯: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನತ್ತೂರು ಗ್ರಾಮದಲ್ಲಿ ಕಳೆದ ಒಂದು ತಿಂಗಳಿAದ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಅಲ್ಲದೆ ಈ ವ್ಯಾಪ್ತಿಯಲ್ಲಿ ಕೊಳವೆ ಬಾವಿಯಿಂದ ಕಂದು ಬಣ್ಣದ ನೀರು ಬಂದು ಕುಡಿಯಲು ಯೋಗ್ಯವಾಗಿರಲ್ಲಿಲ್ಲ. ಈ ನೀರನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಇದರ ವರದಿ ಬರುವ ತನಕ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿತ್ತು.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಗಮನಕ್ಕೆ ತಂದ ನಂತರ ಸಮಸ್ಯೆಯನ್ನು ಆಲಿಸಿದ ಶಾಸಕರು ತಮ್ಮ ಅನುದಾನದಲ್ಲಿ ಕೊಳವೆ ಬಾವಿಯನ್ನು ಕೊರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಬಸವನತ್ತೂರು ಗ್ರಾಮ ಆನೆ ಕೆರೆಯ ಹತ್ತಿರ ಜಾಗವನ್ನು ಗುರುತಿಸಿ ಕೊಳವೆ ಬಾವಿಯನ್ನು ಕೊರೆಯಲಾಗುತ್ತಿದೆ.

ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರು, ದಿನೇಶ್, ಫಿಲೋಮಿನಾ, ಗ್ರಾಮದ ಪ್ರಮುಖರಾದ ಆರ್. ಕೃಷ್ಣ, ರವಿ, ವರದರಾಜ್ ದಾಸ್, ಮಹದೇವ, ಶಿವಕುಮಾರ್ ಮತ್ತಿತರರು ಇದ್ದರು.