ಕೂಡಿಗೆ, ಏ. ೨೦: ಹುದುಗೂರು ಗ್ರಾಮದಲ್ಲಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕೈಂಕರ್ಯ ಶ್ರದ್ಧಾಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ದೇವರಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು ನಡೆದವು. ಮಧ್ಯಾಹ್ನ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಅನ್ನಸಂತರ್ಪಣೆ, ಸಂಜೆ ದೇವಾಲಯದ ಆವರಣದಲ್ಲಿ ದೀಪಾಲಂಕಾರ, ವಿಶೇಷ ಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.

ಸರಳವಾಗಿ ನಡೆದ ವಾರ್ಷಿಕ ಪೂಜೆ ಕಾರ್ಯಕ್ರಮದಲ್ಲಿ ಹುದುಗೂರು, ಮದಲಪುರ, ಹಾರಂಗಿ, ಕೂಡಿಗೆ, ವ್ಯಾಪ್ತಿಯ ಭಕ್ತಾದಿಗಳು ಪಾಲ್ಗೊಂಡಿದ್ದರು. ದೇವಾಲಯದಲ್ಲಿ ಕೋವಿಡ್ ನಿಯಮಗಳನ್ನು ಅನುಸರಿಸಲಾಗಿತು. ಧಾರ್ಮಿಕ ಕಾರ್ಯಕ್ರಮವನ್ನು ದೇವಾಲಯದ ಅರ್ಚಕ ಸುಬ್ರಹ್ಮಣ್ಯ ತಂಡ ನೆರವೇರಿಸಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ಸರ್ವ ಸದಸ್ಯರು ಭಾಗವಹಿಸಿದ್ದರು.