ಸುಂಟಿಕೊಪ್ಪ, ಏ. ೨೦: ಕೋವಿಡ್ ಸೋಂಕು ಅಧಿಕವಾಗುತ್ತಿರುವ ಹಿನ್ನೆಲೆ ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸುಂಟಿಕೊಪ್ಪಕ್ಕೆ ಭೇಟಿ ನೀಡಿ ನಗರದ ಪ್ರಮುಖ ಸ್ಥಳಗಳಿಗೆ ಅಂಗಡಿಗಳಿಗೆ ಹೊಟೇಲ್, ಬಾರ್, ವೈನ್ ಶಾಪ್ಗಳಿಗೆ ಕಾಲ್ನಡಿಗೆ ಮೂಲಕ ಸಂಚರಿಸಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾ. ೨೦ರ ಸಂಜೆ ೬ ಗಂಟೆಗೆ ಸುಂಟಿಕೊಪ್ಪ ನಗರದ ಗಣೇಶ ಸಿನಿಮಾ ಮಂದಿರದಿAದ ಹಿಡಿದು ಮಾದಾಪುರ ರಸ್ತೆಯ ರಾಮ ಮಂದಿರದವರೆಗೆ ಕಾಲ್ನಡಿಗೆಯಲ್ಲಿ ಸಂಚರಿಸಿ ನಿಯಮ ಉಲ್ಲಂಘಿಸುತ್ತಿರುವ ಅಂಗಡಿ ಮಾಲೀಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು.
ಅಲ್ಲದೆ ಸುಂಟಿಕೊಪ್ಪದಲ್ಲಿ ನಿಯಮ ಪಾಲಿಸದ ಎರಡು ಬಾರ್ಗಳನ್ನು ಮುಚ್ಚುವಂತೆ ಆದೇಶ ನೀಡಿದರು. ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಡಿವೈಎಸ್ಪಿ ಹೆಚ್.ಎಂ. ಶೈಲೇಂದ್ರ, ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್, ಸುಂಟಿಕೊಪ್ಪ ಪೊಲೀಸ್ ಸಿಬ್ಬಂದಿ ಹಾಜರಿದ್ದರು