ಗೋಣಿಕೊಪ್ಪಲು. ಏ.೨೦: ವ್ಯಾಘ್ರನ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಲ್ಲೂರು ಗ್ರಾಮದಲ್ಲಿ ನಡೆದಿದೆ. ತೀತರಮಾಡ ಬೋಸ್ ಸುಬ್ಬಯ್ಯ ಎಂಬವರ ಸಿಂದಿ ತಳಿಯ
ರೈತನ ಕುಟುಂಬಕ್ಕೆ ಈ ಹಸುವು ಜೀವನಾದಾರವಾಗಿತ್ತು. ಪ್ರತಿ ದಿನ ಆರು ಲೀಟರ್ ಹಾಲು ನೀಡುತ್ತಿತ್ತು. ಮಾಹಿತಿ ತಿಳಿದ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಪದಾಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅರಣ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಹುಲಿ ಹಾವಳಿಯಿಂದ ಕೊಡಗಿನ ರೈತರನ್ನು ರಕ್ಷಿಸುವಂತೆ ಮನವಿ ಮಾಡಿದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯಿಸಿದರು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.