ಮಡಿಕೇರಿ, ಏ. ೨೦: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. ೨೩ ರಂದು ಕೊಡಗು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಅಂದು ಬೆಳಗ್ಗೆ ೧೧ ಗಂಟೆಗೆ ಕೋವಿಡ್ ಸೋಂಕು ನಿಯಂತ್ರಣ ಮತ್ತು ಚಿಕಿತ್ಸೆಗೆ ಸಂಬAಧಿಸಿದAತೆ ಕೈಗೊಂಡ ಕ್ರಮಗಳ ಕುರಿತು ಶಾಸಕರು, ಸಂಸದರು, ಅಧಿಕಾರಿ ಗಳೊಂದಿಗೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬಳಿಕ ೧೨ ಗಂಟೆಗೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೆ ಟ್ಯಾಬ್ ವಿತರಣೆ ಮಾಡಿ ಮಧ್ಯಾಹ್ನ ೧ ಗಂಟೆಗೆ ಬಿಳಿಗೆರೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಿರುವ ೨೨ ಮನೆಗಳ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಿ ದ್ದಾರೆ. ಮಧ್ಯಾಹ್ನ ೩ ಗಂಟೆಗೆ ಗಾಳಿಬೀಡು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಿರುವ ೧೪೦ ಮನೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಮರುದಿನ ಕುಶಾಲನಗರ ರಸ್ತೆ ಮೂಲಕ ಬೆಂಗಳೂರು ತೆರಳಲಿದ್ದಾರೆ.