ಕೂಡಿಗೆ, ಏ. ೨೦: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ-ಸೀಗೆಹೊಸೂರು ರಸ್ತೆಯು ತೀರಾ ಹಾಳಾಗಿದ್ದ ಹಿನ್ನೆಲೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ.
ಭುವನಗಿರಿ- ಸೀಗೆಹೊಸೂರು ರಸ್ತೆಯು ಸೋಮವಾರಪೇಟೆಗೆ ಹೋಗಲು ಹತ್ತಿರದ ಮಾರ್ಗವಾಗಿದ್ದು, ಈ ರಸ್ತೆಯು ಗುಂಡಿಮಯವಾಗಿದ್ದು, ಗ್ರಾಮಸ್ಥರು ಮನವಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರಿಗೆ ಸಲ್ಲಿಸಿದರು. ಅವರ ಸೂಚನೆಯಂತೆ ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ. ೪೫ ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಆರ್. ಮಂಜುಳ ಮತ್ತು ಸ್ಥಳೀಯ ಗ್ರಾಮಸ್ಥರು ಪರಿಶೀಲಿಸಿದರು.