ಕುಶಾಲನಗರ, ಏ. ೨೦: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಹಲವು ಪ್ರಕ್ರಿಯೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ. ಅವರು ಕುಶಾಲನಗರ ಸಮೀಪ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ದರು.

ಈಗಾಗಲೇ ಜಿಲ್ಲೆಯಲ್ಲಿ ಕೂಡಿಗೆ, ವೀರಾಜಪೇಟೆ, ಮಡಿಕೇರಿಯಲ್ಲಿ ೩ ಕೋವಿಡ್ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೂಡಿಗೆಯಲ್ಲಿ ೧೦೦ ಹಾಸಿಗೆ ಇರುವ ಕೋವಿಡ್ ಕೇಂದ್ರದಲ್ಲಿ ಎಲ್ಲಾ ರೀತಿಯ ಮುಂಜಾಗ್ರತೆ ಕೈಗೊಳ್ಳಲಾಗಿದೆ. ಕಳೆದ ಬಾರಿ ಸೋಮವಾರಪೇಟೆ ತಾಲೂಕು ವ್ಯಾಪ್ತಿಗೆ ಇದೇ ಕೇಂದ್ರ ಕಾರ್ಯ ನಿರ್ವಹಿಸಿತ್ತು. ಇಂದಿನಿAದಲೇ ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಈ ಕೇಂದ್ರಗಳಲ್ಲಿ ಅಧಿಕಾರಿ ಸಿಬ್ಬಂದಿಗಳು ಮತ್ತು ವೈದ್ಯರನ್ನು ನಿಯೋಜಿಸಲಾಗುವುದು ಎಂದರಲ್ಲದೆ, ಜೊತೆಗೆ ಜಿಲ್ಲಾಸ್ಪತ್ರೆಯಲ್ಲೂ ಎಲ್ಲಾ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಎಲ್ಲರೂ ಕೋವಿಡ್ ನಿಯಮ ಗಳನ್ನು ತಪ್ಪದೇ ಪಾಲಿಸ ಬೇಕು. ಮಾಸ್ಕ್ ಧರಿಸುವುರೊಂದಿಗೆ ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವುದು ಕಡ್ಡಾಯ ವಾಗಿದೆ. ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸುವ ಕೋವಿಡ್ ನಿಯಮಾವಳಿಗಳನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕೆಂದು ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದರು. ಪ್ರತಿಯೊಬ್ಬರೂ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಈ ಸಂದರ್ಭ ಮನವಿ ಮಾಡಿದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು, ಕುಶಾಲನಗರ ತಹಶೀಲ್ದಾರ್ ಪ್ರಕಾಶ್, ಉಪ ತಹಶೀಲ್ದಾರ್ ಚಿನ್ನಪ್ಪ, ಕಂದಾಯ ಅಧಿಕಾರಿ ಸಂತೋಷ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.