ಮಡಿಕೇರಿ, ಏ. ೨೦: ಜಿಲ್ಲೆಯಲ್ಲಿ ಮಂಗಳವಾರ ೫೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೫ ಆರ್ಟಿಪಿಸಿಆರ್ ಮತ್ತು ೩೬ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೨, ಸೋಮವಾರಪೇಟೆ ತಾಲೂಕಿನಲ್ಲಿ ೨೯, ವೀರಾಜಪೇಟೆ ತಾಲೂಕಿನಲ್ಲಿ ೧೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೭೦೨೩ ಆಗಿದ್ದು, ೬೫೧೦ ಮಂದಿ ಗುಣಮುಖರಾಗಿದ್ದಾರೆ. ೪೨೮ ಸಕ್ರಿಯ ಪ್ರಕರಣಗಳಿದ್ದು, ೮೫ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೨೧೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.