ಮಡಿಕೇರಿ, ಏ. ೨೦: ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಗೌಳಿಬೀದಿಯ ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ೧೪ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ತಾ. ೨೩ ರಂದು ನಡೆಯಲಿದೆ.
ಅಂದು ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ದೇವಿಗೆ ದೀಪಾರಾಧನೆ, ದೇವಿ ಪೂಜೆ, ಕಳಸ ಪೂಜೆ, ಬ್ರಹ್ಮ ಕಳಶಾಭಿಷೇಕ ಮತ್ತು ಮಹಾಪೂಜೆ ನೆರವೇರಲಿದೆ. ಭಕ್ತಾಧಿಗಳು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.