ಸೋಮವಾರಪೇಟೆ, ಏ. ೨೦: ತಾ. ೧೫ ರಂದು ಹಾನಗಲ್ಲು ಗ್ರಾಮದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ವಿಚಾರಣೆ ನೆಪದಲ್ಲಿ ಅಮಾಯಕ ಕಾಂಗ್ರೆಸ್ ಕಾರ್ಯಕರ್ತ ರಿಗೆ ಕಿರುಕುಳ ನೀಡುತ್ತಿದ್ದು, ಇದನ್ನು ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ ಎಂದು ಅಧ್ಯಕ್ಷ ಬಿ.ಬಿ. ಸತೀಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ವಿ. ಮಿಥುನ್ ಹಾಗೂ ಸಂಪತ್ ಅವರುಗಳ ನಡುವೆ ವೈಯಕ್ತಿಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಇದಕ್ಕೂ ರಾಜಕಾರಣಕ್ಕೂ ಸಂಬAಧವಿಲ್ಲ. ಆದರೂ ಬಿಜೆಪಿಯ ಕೆಲವರು ಘಟನೆಗೆ ಸಂಬAಧಿಸಿದAತೆ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು. ಘಟನೆಗೆ ಸಂಬAಧಿಸಿದAತೆ ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ತೆರಳಿ ದರ್ಪದಿಂದ ವರ್ತಿಸುತ್ತಿರುವುದು ಸಂಬAಧವಿಲ್ಲ. ಆದರೂ ಬಿಜೆಪಿಯ ಕೆಲವರು ಘಟನೆಗೆ ಸಂಬAಧಿಸಿದAತೆ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು. ಘಟನೆಗೆ ಸಂಬAಧಿಸಿದAತೆ ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ತೆರಳಿ ದರ್ಪದಿಂದ ವರ್ತಿಸುತ್ತಿರುವುದು ಬುದ್ದಿಮಾತು ಹೇಳಿ ಪ್ರಕರಣವನ್ನು ಇತ್ಯರ್ಥಪ ಡಿಸಿಕೊಳ್ಳುವ ಸಂದರ್ಭ ದಲ್ಲಿ, ಒತ್ತಡಕ್ಕೆ ಮಣಿದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸತೀಶ್ ಹೇಳಿದರು.
ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ಆಗ್ರಹಿಸಿರುವುದು ಅಸಂಬದ್ಧ ಎಂದು ಅಭಿಪ್ರಾಯಿಸಿದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜೆ. ಸುನಿಲ್, ಕಿಸಾನ್ ಘಟಕದ ಅಧ್ಯಕ್ಷ ಬಸವರಾಜು, ಮುಖಂಡರಾದ ವಿ.ಎ. ಲಾರೆನ್ಸ್, ಕೆ.ಎ. ಯಾಕೂಬ್ ಅವರುಗಳು ಉಪಸ್ಥಿತರಿದ್ದರು.