ಕೂಡಿಗೆ, ಏ. ೨೧: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಆವರಣ ಮುಂಭಾಗದಲ್ಲಿ ಆರೋಗ್ಯ ಮಾಹಿತಿ ಮತ್ತು ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕರು ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು. ಇಲಾಖೆ ಮತ್ತು ಸರಕಾರ ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಿಗದಿಪಡಿಸಿದ ಸ್ಥಳದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಿದರು. ಮೊದಲ ಲಸಿಕೆ ಪಡೆದವರು ಇಲಾಖೆಯವರು ತಿಳಿಸಿದ ದಿನದ ಒಳಗೆ ಎರಡನೇ ಲಸಿಕೆಯನ್ನು ಸಹ ಪಡೆಯಬೇಕು. ಅಲ್ಲದೆ ಗ್ರಾಮಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂಬದರ ವಿಷÀಯಗಳನ್ನು ಕರಪತ್ರ ಹಂಚುವುದರ ಮೂಲಕ ಮಾಹಿತಿಯನ್ನು ನೀಡಿದರು.
ವಸ್ತು ಪ್ರದರ್ಶನದಲ್ಲಿ ಆರೋಗ್ಯ ಇಲಾಖೆಯು ಕೊರೊನಾ ವಿರೋಧ ಕೈಗೊಂಡಿರುವ ವಿವಿಧ ಯೋಜನೆಯ ಮತ್ತು ಸಾರ್ವಜನಿಕರು ವಹಿಸಬೇಕಾದ ನಿಯಮಗಳನ್ನು ಭಿತ್ತಿಪತ್ರದಲ್ಲಿ ಇಡಲಾಗಿದೆ.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.