ಕುಶಾಲನಗರ, ಏ. ೨೧: ಕುಶಾಲನಗರ ಸಮೀಪದ ಕೂಡುಮಂಗಳೂರು ಬಳಿಯ ಭಾರತೀಯ ಆಹಾರ ಸಂಗ್ರಹ ಗೋದಾಮುಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಬಡಾವಣೆಯ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧೀನದಲ್ಲಿರುವ ಗೋದಾಮಿನಲ್ಲಿ ದಾಸ್ತಾನು ಮಾಡಲಾದ ಅಕ್ಕಿಯ ಗುಣಮಟ್ಟದ ಬಗ್ಗೆ ಅಧಿಕಾರಿಗಳ ಜತೆ ಮಾಹಿತಿ ಸಂಗ್ರಹಿಸಿದ ಜಿಲ್ಲಾಧಿಕಾರಿ ಗೋದಾಮಿನ ಸುತ್ತಮುತ್ತಲಿನ ಪರಿಸರದಲ್ಲಿರುವ ಕಾಫಿ ಸಂಸ್ಕರಣಾ ಘಟಕ, ಕ್ರಷರ್‌ನಿಂದ ಉಂಟಾಗುವ ಪರಿಣಾಮದ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದರು. ವ್ಯತಿರಿಕ್ತ ಪರಿಣಾಮಗಳು ಕಂಡುಬAದಲ್ಲಿ ಕ್ರಮಕೈಗೊಳ್ಳಲು ಸ್ಥಳದಲ್ಲಿ ಇದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಗಮದ ವ್ಯವಸ್ಥಾಪಕ ರಮೇಶ್, ಜಿಲ್ಲಾ ಆಹಾರ ಇಲಾಖೆ ಉಪನಿರ್ದೇಶಕ ಸೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಸುಧಾ ಮತ್ತಿತರರು ಇದ್ದರು.