ಸೋಮವಾರಪೇಟೆ, ಏ. ೨೧: ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆಯುವ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವವನ್ನು ಈ ವರ್ಷ ರದ್ದುಗೊಳಿಸಲಾಗಿದೆ.
ಕಳೆದ ವರ್ಷವೂ ಕೊರೊನಾ ಹಿನ್ನೆಲೆ ಸುಗ್ಗಿಯನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ತಾ. ೨೯ ಹಾಗೂ ೩೦ರಂದು ಸುಗ್ಗಿ ಹಬ್ಬ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತಾದರೂ ಕೊರೊನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತಿರುವುದು ಹಾಗೂ ಸರ್ಕಾರದ ಮಾರ್ಗಸೂಚಿ ಹಿನ್ನೆಲೆ ಸುಗ್ಗಿಯನ್ನು ರದ್ದುಗೊಳಿಸಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ರಾಜಗೋಪಾಲ್ ತಿಳಿಸಿದ್ದಾರೆ.