ಬೆಂಗಳೂರು, ಏ. ೨೧: ಮಾನವ-ವನ್ಯಜೀವಿ ಸಂಘರ್ಷದಿAದ ಹಸು, ಎಮ್ಮೆ, ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಈಗ ನೀಡಲಾಗುತ್ತಿರುವ ಪರಿಹಾರ ಹಣವನ್ನು ೧೦ ಸಾವಿರದಿಂದ ೭೫ ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.ಈ ಸಂಬAಧ ನಿನ್ನೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ೨೦ ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ಅನಂತರ ಸ್ಥಳೀಯ ಪಶು ವೈದ್ಯಾಧಿಕಾರಿಗಳು ಸತ್ತ ಸಾಕುಪ್ರಾಣಿಯ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ನಂತರ ಉಳಿದ ಮೊತ್ತ (ಗರಿಷ್ಠರೂ. ೭೫ ಸಾವಿರ ಮಿತಿಗೆ ಒಳಪಟ್ಟು) ಪಾವತಿಸಬಹುದಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಇದರ ಜೊತೆ ಕುರಿ, ಮೇಕೆ, ಆಡು ಮೃತಪಟ್ಟಲ್ಲಿ

(ಮೊದಲ ಪುಟದಿಂದ) ಈಗ ನೀಡುತ್ತಿರುವ ರೂ. ೫೦೦೦ ಪರಿಹಾರ ಧನವನ್ನು ರೂ. ೧೦ ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ಆದೇಶದ ಮೂಲಕ ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.