ಮಡಿಕೇರಿ, ಏ. ೨೧: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಆಘಾತಕಾರಿ ಎಂಬAತೆ ಸ್ಫೋಟಗೊಳ್ಳುತ್ತಿದ್ದು, ಕೊಡಗು ಜಿಲ್ಲೆಯಲ್ಲಿಯೂ ದಿನೇ ದಿನೇ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ.

ತಾ. ೨೧ ರಂದು ಈ ಬಾರಿಯ ಹೆಚ್ಚು ಪ್ರಕರಣಗಳು ದಾಖಲಾಗಿ ರುವದು ಕಂಡು ಬಂದಿದೆ. ಮಾತ್ರವಲ್ಲದೆ ಸೋಮವಾರಪೇಟೆ ವೃದ್ಧೆಯೋರ್ವರು ಹಾಗೂ ಕುಶಾಲನಗರದಲ್ಲಿ ಉದ್ಯಮಿ ಯೋರ್ವರು ಸೋಂಕಿನಿAದ ಮೃತ ಪಟ್ಟಿರುವ ಘಟನೆ ವರದಿಯಾಗಿದೆ. ಇಂದು ಕೊಡಗಿನಲ್ಲಿ ೧೫೯ ಪ್ರಕರಣ ಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಆರೈಕೆಗೆ ಸಮಸ್ಯೆಗಳೂ ಉಂಟಾಗುತ್ತಿವೆ. ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿನ ಎಲ್ಲಾ ಬೆಡ್‌ಗಳೂ ಭರ್ತಿಯಾಗಿವೆ. ಇನ್ನೂ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಹೊಸ ಪ್ರಯತ್ನಗಳನ್ನು ನಡೆಸಬೇಕಾಗಿದೆ.

(ಮೊದಲ ಪುಟದಿಂದ) ಸದ್ಯದ ಮಟ್ಟಿಗೆ ಹೆಚ್ಚು ಸಮಸ್ಯೆಯಾಗಿಲ್ಲ. ಆದರೆ ಕೋವಿಡ್ ಆಸ್ಪತ್ರೆಯ ಬೆಡ್‌ಗಳೆಲ್ಲವೂ ಭರ್ತಿಯಾಗಿರುವುದರಿಂದ ಮುಂದೆ ಇತರೆಡೆಯ ಕೋವಿಡ್ ಸೆಂಟರ್‌ಗಳಿಗೆ ಸೋಂಕಿತ ವ್ಯಕ್ತಿಗಳನ್ನು ಸೇರಿಸಬೇಕಾಗಬಹುದು. ಪ್ರಸ್ತುತ ಜಿಲ್ಲೆಯ ಮೂರು ತಾಲೂಕುಗಳಲ್ಲಿಯೂ ಒಂದೊAದು ಕೇಂದ್ರಗಳು ಸಿದ್ಧವಿದೆ. ಆದರೆ ಈ ತನಕ ಈ ಕೇಂದ್ರಗಳಿಗೆ ಯಾರನ್ನೂ ಸೇರಿಸಲಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮೋಹನ್ ತಿಳಿಸಿದ್ದಾರೆ. ಮೂರು ಕೇಂದ್ರಗಳ ಜೊತೆಗೆ ಇನ್ನೂ ೩ ಕೇಂದ್ರಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿರುವ ಅವರು ಅವಶ್ಯಕತೆ ಇರುವವರನ್ನು ಮಾತ್ರ ಆಸ್ಪತ್ರೆಯಲ್ಲಿ ದಾಖಲಿಸಿ ಇತರರಿಗೆ ಸೂಕ್ತ ಔಷಧಿಯೊಂದಿಗೆ ಮಾರ್ಗದರ್ಶನ ನೀಡಿ ಹೋಂ ಐಸೋಲೇಷನ್‌ಗೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಬುಧವಾರ ೧೫೯ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೪೨ ಆರ್‌ಟಿಪಿಸಿಆರ್ ಮತ್ತು ೧೭ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ ೫೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೮ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ ೫೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೫ ಆರ್‌ಟಿಪಿಸಿಆರ್ ಮತ್ತು ೧೧ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವೀರಾಜಪೇಟೆ ತಾಲೂಕಿನಲ್ಲಿ ೫೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೪೯ ಆರ್‌ಟಿಪಿಸಿಆರ್ ಮತ್ತು ೪ ಪ್ರಕರಣಗಳು ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೭೧೮೨ ಆಗಿದ್ದು, ೬೫೨೯ ಮಂದಿ ಗುಣಮುಖರಾಗಿದ್ದಾರೆ. ೫೬೭ ಸಕ್ರಿಯ ಪ್ರಕರಣಗಳಿದ್ದು, ೮೬ ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೨೩೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

ಸೋಮವಾರಪೇಟೆ: ವೃದ್ಧೆ ಬಲಿ

ಸೋಮವಾರಪೇಟೆ: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ವೃದ್ಧೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಅವರ ಗಂಟಲು ದ್ರವ ಪರೀಕ್ಷೆ ಸಂದರ್ಭ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಮವಾರಪೇಟೆ ಪಟ್ಟಣ ಸಮೀಪದ ಗ್ರಾಮವೊಂದರ ನಿವಾಸಿ, ೬೫ರ ಪ್ರಾಯದ ವೃದ್ಧೆಯನ್ನು ನಿನ್ನೆ ದಿನ ಅನಾರೋಗ್ಯ ಹಿನ್ನೆಲೆ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆರೋಗ್ಯ ಸ್ಥಿತಿ ಗಂಭೀರಗೊAಡ ಹಿನ್ನೆಲೆ ಬೇರೆ ಆಸ್ಪತ್ರೆಗೆ ಸಾಗಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ವೃದ್ಧೆ ಮೃತಪಟ್ಟಿದ್ದಾರೆ. ಕೊರೊನಾ ವೈರಸ್‌ನ ರ‍್ಯಾಪಿಡ್ ಪರೀಕ್ಷೆಯಲ್ಲಿ ವೃದ್ಧೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸರ್ಕಾರದಿಂದ ಬಿಡುಗಡೆ ಮಾಡಿರುವ ಕೊರೊನಾ ಮಾರ್ಗಸೂಚಿಯನ್ವಯ ಅಂತ್ಯಕ್ರಿಯೆ ನಡೆಸಲಾಯಿತು.

ಕುಶಾಲನಗರದಲ್ಲಿ ಉದ್ಯಮಿ ಬಲಿ

ಕುಶಾಲನಗರ: ಕುಶಾಲನಗರದ ಉದ್ಯಮಿ ಹಾಗೂ ಆರ್ಯ ವೈಶ್ಯ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ವಿ.ಪಿ. ನಾಗೇಶ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡು ಮಡಿಕೇರಿ ಆಸ್ಪತ್ರೆಗೆ ದಾಖಲಾದ ನಾಗೇಶ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ನಾಗೇಶ್ ಕುಶಾಲನಗರದಲ್ಲಿ ವಿವಿಧ ಸಂಘ-ಸAಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಆಟೋ ಮಾಲೀಕರು ಚಾಲಕರ ಸಂಘದ ಗೌರವಾಧ್ಯಕ್ಷರಾಗಿ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ, ಕುಶಾಲನಗರ ದೇವಾಲಯಗಳ ಒಕ್ಕೂಟದ ಉಪಾಧ್ಯಕ್ಷ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು. ಚೇಂಬರ್ ಆಫ್ ಕಾಮರ್ಸ್, ಆಟೋ ಮಾಲೀಕರು ಚಾಲಕರ ಸಂಘ, ದೇವಾಲಯಗಳ ಒಕ್ಕೂಟದ ಪ್ರಮುಖರು ನಾಗೇಶ್ ಅವರ ನಿಧನ ಹಿನ್ನೆಲೆಯಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಕೋವಿಡ್ ಮಾರ್ಗಸೂಚಿಯಂತೆ ಕುಶಾಲನಗರದಲ್ಲಿ ನಡೆಯಿತು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

ಯುವಮೋರ್ಚಾದಿಂದ ಅಂತ್ಯಸAಸ್ಕಾರ

ಸಾವಿಗೀಡಾದ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ವೃದ್ಧೆಯ ಅಂತ್ಯ ಸಂಸ್ಕಾರ ನೆರವೇರಿಸಿದರು.