ಮಡಿಕೇರಿ, ಏ. ೨೨: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೦-೨೧ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ ಎ, ೩ಎ ಹಾಗೂ ೩ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ. ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳನ್ನು ವೆಬ್‌ಸೈಟ್ ತಿತಿತಿ.bಛಿತಿ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫/ ೮೦೫೦೭೭೦೦೦೪ ಇ-ಮೇಲ್ bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜು ಅವರು ತಿಳಿಸಿದ್ದಾರೆ.