ಪೊನ್ನಂಪೇಟೆ, ಏ. ೨೨: ಸಾರ್ವಜನಿಕರಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಪೊನ್ನಂಪೇಟೆ ಪೊಲೀಸ್ ಠಾಣೆ ವತಿಯಿಂದ ಕೋವಿಡ್-೧೯ ವಿರುದ್ಧ ಜನಾಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಪೊನ್ನಂಪೇಟೆ ಠಾಣಾಧಿಕಾರಿ ಡಿ. ಕುಮಾರ್ ಅವರ ನೇತೃತ್ವದಲ್ಲಿ, ಸಿಬ್ಬಂದಿಗಳ ತಂಡ ಪೊನ್ನಂಪೇಟೆ ಹಾಗೂ ಬಾಳೆಲೆಯಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿತು.