ಸೋಮವಾರಪೇಟೆ, ಏ. ೨೨: ಕೋವಿಡ್ ಮಾರ್ಗಸೂಚಿಯನ್ನು ಮೀರಿದ ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಸ್ಥಳೀಯ ಆಡಳಿತ ಬಿಸಿ ಮುಟ್ಟಿಸಿದ್ದು, ಅಂಗಡಿಗಳನ್ನು ಮುಚ್ಚಿಸಿ ಮೊಕದ್ದಮೆ ದಾಖಲಿಸುವ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ತಾಲೂಕು ತಹಶೀಲ್ದಾರ್ ಗೋವಿಂದರಾಜು, ವೃತ್ತನಿರೀಕ್ಷಕ ಮಹೇಶ್, ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ಅವರುಗಳ ನೇತೃತ್ವದ ತಂಡ ಪಟ್ಟಣದಲ್ಲಿ ಸಂಚರಿಸಿ, ಕೋವಿಡ್ ಮಾರ್ಗಸೂಚಿಗಳ ಜಾರಿಗೆ ಸಂಬAಧಿಸಿದAತೆ ಪರಿಶೀಲನೆ ನಡೆಸಿತು.

ಈ ಸಂದರ್ಭ ಕೆಲವೊಂದು ಹೊಟೇಲ್, ಕ್ಯಾಂಟೀನ್‌ಗಳಲ್ಲಿ ತಿಂಡಿ, ತಿನಿಸು ನೀಡುತ್ತಿದ್ದುದು, ಅಂಗಡಿ ಮುಂಗಟ್ಟುಗಳಲ್ಲಿ ವರ್ತಕರು ಕೋವಿಡ್ ನಿಯಮಾವಳಿಗಳನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷö್ಯ ವಹಿಸಿದ್ದುದನ್ನು ಕಂಡ ತಂಡ, ಅಂತಹ ಹೊಟೇಲ್, ಕ್ಯಾಂಟೀನ್, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ ಮೊಕದ್ದಮೆ ದಾಖಲಿಸಿಕೊಂಡು ದಂಡ ವಿಧಿಸಿದರು.

ಇದೇ ಸಂದರ್ಭ ಪಟ್ಟಣದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದ ಸಾರ್ವಜನಿಕರಿಗೂ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.

ತಹಶೀಲ್ದಾರ್ ಗೋವಿಂದರಾಜು ಮಾತನಾಡಿ, ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿ ಹೊರಡಿಸಿದ್ದು ಅದರಂತೆ ಹೊಟೇಲ್, ರೆಸ್ಟೋರೆಂಟ್, ಕ್ಯಾಂಟೀನ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿದೆ. ಆದರೆ ಪಟ್ಟಣದ ಕೆಲವು ಹೊಟೇಲ್‌ಗಳಲ್ಲಿ ಅಲ್ಲಿಯೇ ತಿಂಡಿ ತಿನಿಸುಗಳನ್ನು ತಿನ್ನಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಹೊಟೇಲ್‌ಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದರು.

ಪ್ರತಿ ಅಂಗಡಿಗಳಲ್ಲೂ ಕಡ್ಡಾಯ ವಾಗಿ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ರಾತ್ರಿ ೯ ಗಂಟೆಯಿAದ ಬೆಳಿಗ್ಗೆ ೬ ಗಂಟೆಯವರೆಗೂ ಕರ್ಫ್ಯೂ ಇರುವುದರಿಂದ ಯಾರೂ ಓಡಾಡುವಂತಿಲ್ಲ. ಇದನ್ನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭ ಕಂದಾಯ, ಪೊಲೀಸ್, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.