ಮಡಿಕೇರಿ, ಏ. ೨೨: ಎಲ್ಲೆಡೆ ಕೋವಿಡ್-೧೯ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ರಾತ್ರಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಶನಿವಾರ ಹಾಗೂ ಭಾನುವಾರ ಪೂರ್ತಿ ದಿವಸ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಖಾಸಗಿ ಬಸ್ಗಳ ಸಂಚಾರ ಇರುವುದಿಲ್ಲ.ಕೋವಿಡ್ ನಿಯಮ ಪಾಲನೆ ಮಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ನುಳಿದಂತೆ ಸೋಮವಾರದಿಂದ ಶುಕ್ರವಾರದವರೆಗೆ ಎಂದಿನAತೆ ಬಸ್ಗಳ ಸಂಚಾರ ಇರಲಿದೆ ಎಂದು ಕೊಡಗು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಅನಾನುಕೂಲತೆಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿರುವ ಅವರು, ಬಸ್ನಲ್ಲಿ ಪ್ರಯಾಣಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವದರೊಂದಿಗೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡುವಂತೆ ಕೋರಿದ್ದಾರೆ.