ಮಡಿಕೇರಿ, ಏ. ೨೨: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಾ. ೨೩ ರಂದು (ಇಂದು) ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್-೧೯ ರ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಸಂಬAಧಿಸಿ ದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಅಧಿಕಾರಿಗ ಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ ೧೨ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಬ್ಲಿಕ್ ಟಿ.ವಿ. ಸಹಯೋಗದೊಂದಿಗೆ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಿಎಸ್‌ಆರ್ ನಿಧಿಯಡಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಟ್ಯಾಬ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ೧ ಗಂಟೆಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣ ಮಾಡಿರುವ ೨೨ ಮನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ೩ ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಗಾಳಿಬೀಡು ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಾಣ ಮಾಡಿರುವ ೧೪೦ ಮನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.