ಕೂಡಿಗೆ, ಏ. ೨೨: ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಒದಗಿಸುವ ಯೋಜನೆಗೆ ಸಂಬAಧಿಸಿದAತೆ ಮತ್ತು ಕೊರೊನಾ ಜಾಗೃತಿ ಮೂಡಿಸುವ ವಿಷಯವಾಗಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷಿö್ಮ ಅವರು ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳ ಅಭಿಪ್ರಾಯಗಳನ್ನು ಸಂಗ್ರಹಿಸಿದ ಲಕ್ಷಿö್ಮ ಅವರು ಸದಸ್ಯರುಗಳು ತಮ್ಮ ವಾರ್ಡ್ಗಳಲ್ಲಿ ಶುಚಿತ್ವ ಮತ್ತು ಕೊರೊನಾ ಬಗ್ಗೆ ಜನಜಾಗೃತಿ ಮೂಡಿಸುವಂತೆ ತಿಳಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರುಮೂಡ್ಲಿಗೌಡ, ಫಿಲೋಮಿನಾ, ದಿನೇಶ್, ಹರೀಶ್ ಮತ್ತಿತರರು ಹಾಜರಿದ್ದರು.