ಚೆಟ್ಟಳ್ಳಿ, ಏ. ೨೨: ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಸಹಯೋಗದಲ್ಲಿ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ಕೊಡಗು ಜಿಲ್ಲಾಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯನ್ನು ವಾರಾಂತ್ಯದ ಕರ್ಫ್ಯೂ ಹಾಗೂ ಸರ್ಕಾರದ ನಿರ್ದೇಶನದ ಮೇರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಹಾಗೂ ಲೀಗ್ ಪಂದ್ಯಾವಳಿಯ ಉಸ್ತುವಾರಿ ಲಿಜೇಶ್ ಅಮ್ಮತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾ. ೨೩ ರಂದು ಕ್ವಾರ್ಟರ್ ಫೈನಲ್ ಪಂದ್ಯಾವಳಿ, ತಾ. ೨೪ ರಂದು ಸೆಮಿಫೈನಲ್ ಹಾಗೂ ತಾ. ೨೫ ರಂದು ಫೈನಲ್ ಪಂದ್ಯಾವಳಿ ನಡೆಯಬೇಕಿತ್ತು, ಆದರೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಸರ್ಕಾರ ಘೋಷಿಸಿರುವ ವಾರಾಂತ್ಯದ ಕರ್ಫ್ಯೂ ಹಾಗೂ ನಿಯಮಗಳನ್ನು ಪಾಲಿಸಿ ಪಂದ್ಯಾವಳಿಯನ್ನು ಮುಂದೂಡಲಾಗಿದ್ದು, ಸದ್ಯದಲ್ಲೇ ಮುಂದಿನ ದಿನಾಂಕವನ್ನು ತಿಳಿಸಲಾಗು ವುದು ಎಂದು ಅವರುಗಳು ತಿಳಿಸಿದ್ದಾರೆ.