ಕುಶಾಲನಗರ, ಏ. ೨೨: ಕೋವಿಡ್ ನಿಯಮಗಳ ಉಲ್ಲಂಘನೆ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗುವುದು ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.

ಕುಶಾಲನಗರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಜೈವರ್ಧನ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಂತರ ಸುದ್ದಿಗಾರರಾರಿಗೆ ಮಾಹಿತಿ ನೀಡಿದ ಕೃಷ್ಣಪ್ರಸಾದ್, ಪಟ್ಟಣ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಏರಿಕೆ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಪ್ರತಿ ವಾರ್ಡ್ ಸದಸ್ಯರು ತಮ್ಮ ವಾರ್ಡ್ ಗಳ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸುವುದರ ಜತೆಗೆ ಕೊರೊನಾ ಸೋಂಕು ತಡೆಗೆ ಜನ ಸಾಮಾನ್ಯರ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಪ್ರತಿ ವಾರ್ಡ್ ಸದಸ್ಯರು ತಮ್ಮ ವಾರ್ಡ್ ಗಳ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆ ರೂಪಿಸುವುದರ ಜತೆಗೆ ಕೊರೊನಾ ಸೋಂಕು ತಡೆಗೆ ಜನ ಸಾಮಾನ್ಯರ ಗಮನಸೆಳೆಯುವ ಮತ್ತು ಸಮಸ್ಯೆ ಬಗೆಹರಿಸುವ ಸಲುವಾಗಿ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದರು.

ಪಟ್ಟಣದ ರಥಬೀದಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ಮಾಡಿದ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಕಾರಣ ೧೧ ಅಂಗಡಿಗಳ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿತ್ತು. ಗುರುವಾರ ಮತ್ತೊಂದು ಅಂಗಡಿ ಸೀಜ್ ಮಾಡಲಾಯಿತು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಮಾತನಾಡಿದ ಅಧ್ಯಕ್ಷರಾದ ಜೈವರ್ಧನ್, ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭ ನಡೆದ ವಿಶೇಷ ಸಭೆಯಲ್ಲಿ ಉಪಾಧ್ಯಕ್ಷೆ ಸುರೈಯಾಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ ಸುರೇಶ್, ಮತ್ತು ಸರ್ವ ಸದಸ್ಯರು ಇದ್ದರು.