ಮಡಿಕೇರಿ, ಏ. ೨೨: ಮಂಗಳೂರು ವಿಶ್ವವಿದ್ಯಾನಿಲಯದ ತುಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಭರತೇಶ್ ಅಲಸಂಡೆ ಮಜಲು ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.

ನಗರದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಅವರು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾಗಿರುವ ಭರತೇಶ್ ಅವರು ತುಳು ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವುದು ವಿಶೇಷ ಎಂದು ಹೇಳಿದರು.

ಸದಸ್ಯರಾದ ವಿಶ್ವನಾಥ ಬದಿಕಾನ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸಣ್ಣ ಗ್ರಾಮದಲ್ಲಿ ಹುಟ್ಟಿ ಬೆಳೆದ ಭರತೇಶ್ ಅವರು ಬ್ಯಾಂಕ್ ವೃತ್ತಿಯ ಜೊತೆಗೆ ಬರವಣಿಗೆ ಹಾಗೂ ಓದಿನಲ್ಲಿ ತೊಡಗಿಸಿಕೊಂಡಿದ್ದು, ಅರೆಭಾಷೆಯಲ್ಲಿ ಸಂಶೋಧನೆ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು.

ಸದಸ್ಯರಾದ ಪುರುಷೋತ್ತಮ ಕಿರ್ಲಾಯ ಅವರು ಮಾತನಾಡಿ ಭರತೇಶ್ ಅವರು ಬಹುಮುಖ ಪ್ರತಿಭೆ ಹೊಂದಿದ್ದು, ಸಾಹಿತ್ಯ ಮತ್ತು ಸಂಶೋಧನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಕಾಡೆಮಿ ಸದಸ್ಯರಾದ ಭರತೇಶ್ ಅಲಸಂಡೆ ಮಜಲು ಅವರು ಯಾವುದೇ ಕ್ಷೇತ್ರದಲ್ಲಿ ಅವಕಾಶ ಸಿಗುವುದು ಕಡಿಮೆ.

ಅವಕಾಶ ಸಿಕ್ಕಾಗ ಶ್ರದ್ಧೆ ಮತ್ತು ಪರಿಶ್ರಮದಿಂದ ಯಶಸ್ಸು ಸಾಧಿಸಲು ಪ್ರಯತ್ನಿಸಬೇಕು. ಅರೆಭಾಷೆ ಸಂಸ್ಕೃತಿಗೆ ಸಂಬAಧಿಸಿದAತೆ ಇನ್ನಷ್ಟು ಲೇಖನಗಳನ್ನು ಬರೆಯಬೇಕು ಎಂದರು.

ಸದಸ್ಯರಾದ ಬೈತಡ್ಕ ಜಾನಕಿ, ಸ್ಮಿತಾ ಅಮೃತರಾಜ್, ಜಯಪ್ರಕಾಶ್ ಮೋಂಟಡ್ಕ, ಧನಂಜಯ ಅಗೋಳಿಕಜೆ, ರಿಜಿಸ್ಟಾçರ್ ಚಿನ್ನಸ್ವಾಮಿ ಇತರರು ಇದ್ದರು.