ಸೋಮವಾರಪೇಟೆ, ಏ. ೨೩: ಕಳೆದ ತಾ. ೧೫ ರಂದು ನಡೆದ ಹಲ್ಲೆ ಘಟನೆಗೆ ಸಂಬAಧಿಸಿದAತೆ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಹಾನಗಲ್ಲು ಗ್ರಾ.ಪಂ. ಉಪಾಧ್ಯಕ್ಷ ಹೆಚ್.ವಿ. ಮಿಥುನ್ ಮೇಲೆ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಹಾನಗಲ್ಲು ಗ್ರಾ.ಪಂ. ಅಧ್ಯಕ್ಷೆ ಲಕ್ಷಿö್ಮÃ ಪಾಂಡಿಯನ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ಲು ಗ್ರಾಮದ ಕಿರಣ್ ಅವರ ಹೆಸರಿನಲ್ಲಿ ಇಟ್ಟಿಗೆ ಫ್ಯಾಕ್ಟರಿ ಇದ್ದು, ಇದಕ್ಕೆ ಪಂಚಾಯಿತಿಯಿAದ ಲೈಸೆನ್ಸ್ ಪಡೆದಿದ್ದಾರೆ. ಕಿರಣ್ ಅವರಿಂದ ಸಂಪತ್ ಅವರು ಭೋಗ್ಯಕ್ಕೆ ಪಡೆದು ಫ್ಯಾಕ್ಟರಿ ನಡೆಸುತ್ತಿದ್ದಾರೆ. ಈ ಸ್ಥಳದಲ್ಲಿ ಬಸವಜ್ಯೋತಿ ಯೋಜನೆಯಡಿ ಮನೆ ನಿರ್ಮಿಸಲಾಗಿದೆ. ಪ್ರಸ್ತುತ ಇದರಲ್ಲಿ ಹೊರ ರಾಜ್ಯದ ವ್ಯಕ್ತಿಗಳು ವಾಸವಿದ್ದು, ಈ ಬಗ್ಗೆ ದೂರುಗಳು ಬಂದ ಹಿನ್ನೆಲೆ ಪರವಾನಗಿ ರದ್ದು ಮಾಡಲಾಗಿದೆ ಎಂದರು.
ಇದೇ ವಿಷಯಕ್ಕೆ ವಾಗ್ವಾದ ನಡೆದಿದೆ. ಈ ಬಗ್ಗೆ ಉಭಯ ಕಡೆಯಿಂದಲೂ ಪೊಲೀಸರಿಗೆ ದೂರು ನೀಡಲಾಗಿದೆ. ಆದರೆ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಮಿಥುನ್ ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಆರೋಪಿಸಿದರು.
ಗೋಷ್ಠಿಯಲ್ಲಿ ಸದಸ್ಯರುಗಳಾದ ಸುಶೀಲ ಹಾನಗಲ್, ಉಷಾ, ಮಾಜಿ ಸದಸ್ಯ ಹರೀಶ್, ಸ್ಥಳೀಯರಾದ ಮರ್ವಿನ್ ಮೋರಸ್ ಅವರುಗಳು ಉಪಸ್ಥಿತರಿದ್ದರು.
ರಾಜೀವ್ ಗಾಂಧಿ ಸಂಘಟನೆ ಆಕ್ಷೇಪ
ಮಿಥುನ್ ಹಾನಗಲ್ ವಿರುದ್ಧ ಬಿಜೆಪಿ ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹೇರಿ ದೂರು ದಾಖಲು ಮಾಡಿಸಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಕೂಡಲೇ ಮಿಥುನ್ ಹಾನಗಲ್ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಬೇಕು. ಇಲ್ಲವಾದರೆ ಜಿಲ್ಲೆಯಾದ್ಯಂತ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಹೇಳಿದರು.
ಕಾಂಗ್ರೆಸ್ ಪ್ರಮುಖ ನಾಪಂಡ ಮುತ್ತಪ್ಪ ಮಾತನಾಡಿ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಲು ಸರಕಾರ ಮುಂಜಾಗ್ರತಾ ಕ್ರಮಕೈಗೊಳ್ಳದೆ ನಿರ್ಲಕ್ಷö್ಯ ತೋರಿದ್ದೆ ಪ್ರಮುಖ ಕಾರಣ ಎಂದು ದೂರಿದರಲ್ಲದೆ, ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದರು.
ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಭಿವೃದ್ಧಿ ಕೆಲಸಗಳಿಗೆ ಮತದಾರರು ಅವಕಾಶ ಕಲ್ಪಿಸಬೇಕೆಂದು ನುಡಿದರು.
ಮಡಿಕೇರಿ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ನಾಪಂಡ ರವಿ, ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ತ್ರಿನೇಶ್, ಪ್ರದೀಪ್, ಸುಜನ್ ಉಪಸ್ಥಿತರಿದ್ದರು.