ಮಡಿಕೇರಿ, ಏ. ೨೩: ಕೋವಿಡ್‌ಗೆ ಸಂಬAಧಿಸಿದAತೆ ರಾಜ್ಯ ಸರ್ಕಾರ ಕಾಟಾಚಾರದ ಮಾರ್ಗಸೂಚಿ ಬಿಡುಗಡೆ ಮಾಡಿದೆ ಎಂದು ಎಸ್‌ಡಿಪಿಐ ರಾಜ್ಯ ಮುಖಂಡ ಅಮೀನ್ ಮೊಹಿಸಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವೇಶ ನಿರ್ಬಂಧಿಸಿರುವ ಸರ್ಕಾರ ಪ್ರವಾಸಿ ತಾಣಗಳನ್ನು ತೆರೆದಿಟ್ಟಿದೆ. ಹೊರಜಿಲ್ಲೆಯಿಂದ ಪ್ರವಾಸಿಗರು ಜಿಲ್ಲೆಗೆ ಬರಬಹುದಾಗಿದ್ದು, ಪಾರ್ಸೆಲ್ ಮೂಲಕ ಅವರಿಗೆ ಬೇಕಾದ ಆಹಾರ ಕಲ್ಪಿಸಲೂ ಅವಕಾಶವಿದೆ. ಆದರೆ, ಸ್ಥಳೀಯ ಮಂದಿರಗಳಿಗೆ ನಿಷೇಧ ಹೇರಲಾಗಿದೆ. ಹೊರ ಜಿಲ್ಲೆಯಿಂದ ಬರುವವರಿಗೆ ನಿಷೇಧ ಹೇರದಿದ್ದಲ್ಲಿ ಕೋವಿಡ್ ನಿಯಂತ್ರಣ ಸಾಧ್ಯವೇ ಎಂದು ಪ್ರಶ್ನಿಸಿದರು.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮನ್ಸೂರ್ ಆಲಿ ಮಾತನಾಡಿ, ನಗರಸಭೆ ಚುನಾವಣೆಗೆ ಪಕ್ಷದಿಂದ ಈ ಬಾರಿ ೯ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಪ್ರಚಾರ ಕಾರ್ಯದಲ್ಲಿ ಎಲ್ಲಾ ಪಕ್ಷದವರೂ ೫ ಮಂದಿಗಿAತ ಹೆಚ್ಚು ತೆರಳದೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ನಗರದ ಜನತೆ ಕೂಡ ಅಗತ್ಯ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕರ್, ನಗರಾಧ್ಯಕ್ಷ ಖಲೀಲ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.